ಬಾಣಂತಿಯರ ಸಾವು ಪ್ರಕರಣ; ಬಳ್ಳಾರಿ ಜಿಲ್ಲಾಸ್ಪತ್ರೆ ಮೇಲೆ Lokayukta ದಾಳಿ

bellary District Hospital
Published on

ಬಳ್ಳಾರಿ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತ (Lokayukta) ಅಧಿಕಾರಿಗಳು ಜಿಲ್ಲಾಸ್ಪತ್ರೆ ಮೇಲೆ ದಾಳಿ ನಡೆಸಿದ್ದಾರೆ.

ಎಸ್​ಪಿ ಸಿದ್ದರಾಜು ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಅಧಿಕಾರಿಗಳು ಹೆರಿಗೆ ವಾರ್ಡ್​, ಐಸಿಯು, ಔಷಧಿ ದಾಸ್ತಾನು ಉಗ್ರಾಣದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. IV ಹಾಗೂ RL ಪ್ಲೂಯಿಡ್ ಔಷಧಿ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಬಾಣಂತಿಯರು ಅಸ್ವಸ್ಥರಾಗಲು ಕಾರಣವೇನು ಎಂಬುವುದರ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ನಿಯೋಗವು ಡಿಸೆಂಬರ್​ 06ರಂದು ಲೋಕಾಯುಕ್ತಕ್ಕೆ (Lokayukta) ದೂರು ನೀಡಿತ್ತು. ಇದರ ಬೆನ್ನಲ್ಲೇ ಆಸ್ಪತ್ರೆ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net