ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿ ಮುಟ್ಟಿಸಿದ ಲೋಕಾ ಪೊಲೀಸರು: ರಾಜ್ಯಾದ್ಯಂತ ಏಕಕಾಲದಲ್ಲಿ 25 ಕಡೆ ದಾಳಿ | Lokayukta raid

karnataka lokayukta
ಲೋಕಾಯುಕ್ತ ಕಚೇರಿ
Published on

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ಬೇಟೆ ಮುಂದುವರಿಸಿರುವ ಲೋಕಾಯುಕ್ತ ಪೊಲೀಸರು ( Lokayukta raid ) ತಮ್ಮ ಕಾರ್ಯಾಚರಣೆಗೆ ಇನ್ನಷ್ಟು ಚುರುಕು ನೀಡಿದ್ದಾರೆ. ಇಂದು (ನ. 21) ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಏಕಕಾಲದಲ್ಲಿ 25 ಕಡೆ ದಾಳಿ ನಡೆಸಿದ್ದು, ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.

ಬೆಳಗಿನ ಜಾವ ಸವಿ ನಿದ್ರೆಯಲ್ಲಿದ್ದ ಅಧಿಕಾರಿಗಳಿಗೆ ಲೋಕಾಯಕ್ತ ಪೊಲೀಸರು ದುಸ್ವಪ್ನವಾಗಿ ಎಂಟ್ರಿ ಕೊಟ್ಟಿದ್ದಾರೆ. ಭ್ರಷ್ಟಾಚಾರ, ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಈ ದಾಳಿ ಮಾಡಿದ್ದಾರೆ. ಸದ್ಯ ಅಧಿಕಾರಿಗಳ ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ಬೆಂಗಳೂರು, ಮೈಸೂರು ಹಾಗೂ ಮಂಡ್ಯ ಸೇರಿದಂತೆ ರಾಜ್ಯದ 25 ಕಡೆ ಏಕಕಾಲದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಅಬಕಾರಿ ಇಲಾಖೆ ಎಸ್​ಪಿ ಮೋಹನ್​, ಟೌನ್​ ಪ್ಲಾನಿಂಗ್​ ನಿರ್ದೇಶಕ ತಿಪ್ಪೇಸ್ವಾಮಿ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಎಂಸಿ ಕೃಷ್ಣವೇಣಿ ಮನೆ ಮೇಲೆ ದಾಳಿ ನಡೆದಿದೆ. ಪ್ರಸ್ತುತ ಕೃಷ್ಣವೇಣಿ ಮಂಗಳೂರಿಗೆ ವರ್ಗವಾಗಿದ್ದು, ಅಲ್ಲಿಯೂ ದಾಳಿ ನಡೆದಿದೆ.

ಮಂಡ್ಯದಲ್ಲಿ ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಮಹೇಶ್​ ಅವರು ಬೆಂಗಳೂರಿನ ಕಾವೇರಿ ನೀರಾವರಿ ನಿಗಮದ ಕಚೇರಿಯಲ್ಲಿ ಎಂಡಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹಲವು ದೂರು ಬಂದ ಹಿನ್ನೆಲೆ ಮಂಡ್ಯ ಲೋಕಾಯುಕ್ತ ಪೊಲೀಸರಿಂದ ದಾಳಿ ನಡೆದಿದೆ. ಮಂಡ್ಯದ ಕೆಆರ್‌ಎಸ್ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್, ಮಳವಳ್ಳಿಯ ದಳವಾಯಿ ಕೋಡಿಹಳ್ಳಿ ನಿವಾಸದಲ್ಲೂ ತಲಾಷ್ ನಡೆಯುತ್ತಿದೆ. ಮಂಡ್ಯ ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ನೇತೃತ್ವದಲ್ಲಿ ದಾಳಿ ನಡೆದಿದ್ದು, ಬೆಳಗ್ಗಿನಿಂದ ಕಡತಗಳ ಪರಿಶೀಲನೆ ನಡೆಯುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net