ಗ್ರಾಮ ಪಂಚಾಯತಿ ಕಚೇರಿ ಮೇಲೆ ಲೋಕಾ ದಾಳಿ

lokayukta-conviction.
Published on

ಬಿಡದಿ(ರಾಮನಗರ): ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ತಾಲೂಕಿನ ಮಂಚನಾಯಕನಹಳ್ಳಿ ಗ್ರಾಮ ಪಂಚಾಯತಿ ಪಿಡಿಒ ಯತೀಶ್ ಚಂದ್ರ ಅವರ ಮನೆ ಹಾಗೂ ಗ್ರಾಮ ಪಂಚಾಯತಿ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಿಗ್ಗೆ ದಾಳಿ ಮಾಡಿದ್ದಾರೆ.

ಮಂಚನಾಯಕನಹಳ್ಳಿ ಗ್ರಾಮ ಪಂಚಾಯತಿ ಕಚೇರಿ ಹಾಗೂ ಮೈಸೂರಿನ ನಿವಾಸದ ಮೇಲೆ ಬೆಂಗಳೂರಿನ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ಮಾಡಿದ್ದಾರೆ. ಸುಮಾರು 5 ಕ್ಕು ಹೆಚ್ಚು ಅಧಿಕಾರಿಗಳ ತಂಡ ದಾಳಿ ಮಾಡಿದೆ.

ಗ್ರಾಮ ಪಂಚಾಯತಿ ಕಚೇರಿಯಲ್ಲಿ ಹಲವು ಕಡತಗಳನ್ನ ಪರಿಶೀಲನೆ ಮಾಡಲಾಗುತ್ತಿದೆ. ಅದೆ ರೀತಿ ಮೈಸೂರಿನ ಮನೆಯಲ್ಲು ಸಹ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಆದಾಯಕ್ಕಿಂತ್ತ ಹೆಚ್ಚು ಆಸ್ತಿ ಸಂಪಾದನೆ ಬಗ್ಗೆ ಹಾಗೂ ಹಲವು ಅಕ್ರಮಗಳ ಬಗ್ಗೆ ಶೇಷಗಿರಿಹಳ್ಳಿ ಗ್ರಾಮದ ಓರ್ವ ವ್ಯಕ್ತಿ ಲೋಕಾಯುಕ್ತಕ್ಕೆ ದೂರು ನೀಡಿದ್ದ. ದೂರಿನ ಹಿನ್ನೆಲೆಯಲ್ಲಿ ದಾಳಿ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net