ಮೈಸೂರಿಗೆ ನ.17 ರಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಭೇಟಿ

santosh hegde
Published on

ಮೈಸೂರು: ಸಮಾನತೆ, ಸ್ವಾಭಿಮಾನ, ಸ್ವಾವಲಂಬನೆ ಪ್ರತಿಷ್ಠಾನ ಮತ್ತು ಸಮಾನತೆ ಪ್ರಕಾಶನ ವತಿಯಿಂದ ಅ.17 ರಂದು ಬೆಳಗ್ಗೆ 11ಕ್ಕೆ ಕಲಾಮಂದಿರ ದಲ್ಲಿ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಷ್ಠಾನದ ಖಜಾಂಚಿ ಭರತ್ ರಾಮಸ್ವಾಮಿ ಹೇಳಿದರು.

ರಾಜ್ಯ ಕಾನೂನು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಸಿ. ಬಸವರಾಜು, ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದಿಂದ ಪಿಎಚ್‌ಡಿ ಪಡೆದಿರುವ ಡಾ. ಕಲ್ಯಾಣಸಿರಿ ಭಂತೇಜಿ ಅವರನ್ನು ಸನ್ಮಾನಿಸಲಾಗುವುದು. ಕಾರ್ಯಕ್ರಮವನ್ನು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಮಹಾಬೋಧಿ ಸೊಸೈಟಿ ಪ್ರಧಾನ ಕಾರ್ಯದರ್ಶಿ ಆನಂದ ಭಂತೇಜಿ, ಸಂಸದ ವಿ. ಶ್ರೀನಿವಾಸ ಪ್ರಸಾದ್, ವಿಶ್ರಾಂತ ಪ್ರಾಧ್ಯಾಪಕ ಡಾ. ನೀಲಗಿರಿ ತಳವಾರ ಪಾಲ್ಗೊಳ್ಳಲಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಪ್ರತಿಷ್ಠಾನದ ಉಪಾಧ್ಯಕ್ಷ ಪಿ. ನಂದಕುಮಾರ್, ಟ್ರಸ್ಟಿ ಶಿವಕುಮಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net