ಲೋಕಾಯುಕ್ತ ಬಲೆಗೆ ಭೂಮಾಪಕ

Chandra mohan
Published on

ಯಲ್ಲಾಪುರ: ಇಲ್ಲಿನ ತಹಸೀಲ್ದಾರ್ ಕಚೇರಿಯ ಭೂಮಾಪನ ವಿಭಾಗದ ಮೇಲೆ ಬುಧವಾರ ಲೋಕಾಯುಕ್ತ ದಾಳಿ ನಡೆದಿದೆ.

ಪೋಡಿ ಕಾರ್ಯಕ್ಕೆ ಲಂಚ ಪಡೆಯುತ್ತಿದ್ದ ಭೂಮಾಪಕ ಚಂದ್ರಮೋಹನ ವಶಕ್ಕೆ ಪಡೆಯಲಾಗಿದೆ.

ಲೋಕಾಯುಕ್ತ ಎಸ್.ಪಿ ಕುಮಾರಚಂದ್ರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ.

ಹುಣಶೆಟ್ಟಿಕೊಪ್ಪದ ಸಾಮಾಜಿಕ ಕಾರ್ಯಕರ್ತ ಧೀರಜ್ ತಿನೇಕರ್ ಅವರಿಂದ ಲಂಚದ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net