ಲೋಕಾಯುಕ್ತರಿಂದ 11 ರಂದು ಜನಸಂಪರ್ಕ ಸಭೆ

Lokayukta to hold public relations meeting on 11th
Published on

ಬಾಗಲಕೋಟೆ : ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧಿಕ್ಷಕರು ಜೂನ್ 11 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ವರೆಗೆ ಬೀಳಗಿ ತಾಲೂಕಿನ ತಹಸೀಲ್ದಾರ ಕಾರ್ಯಾಲಯದಲ್ಲಿ ಜನಸಂಪರ್ಕ ಸಭೆ ಹಮ್ಮಿಕೊಂಡಿದ್ದಾರೆ.

ಸದರಿ ಸಭೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಅಧಿಕತ ಕೆಲಸಗಳನ್ನು ಮಾಡಿಕೊಡುವಲ್ಲಿ ವಿನಾಕಾರಣ ವಿಳಂಬ ಹಾಗೂ ಇನ್ನಿತರ ತೊಂದರೆ ಆಗಿದ್ದಲ್ಲಿ ಅಂತಹ ಅಧಿಕಾರಿ ಮತ್ತು ನೌಕರರ ವಿರುದ್ದ ಸಾರ್ವಜನಿಕರು ಸಭೆಗೆ ಹಾಜರಾಗಿ ತಮ್ಮ ಲಿಖಿತ ದೂರುಗಳನ್ನು ನಿಗದಿತ ಪ್ರಪತ್ರದಲ್ಲಿ ನೀಡಬಹುದಾಗಿದೆ.

ಸ್ಥಳದಲ್ಲಿಯೇ ಇತ್ಯರ್ಥಪಡಿಸಬಹುದಾದ ದೂರುಗಳನ್ನು ಸ್ಥಳೀಯ ಅಧಿಕಾರಿಗಳ ಸಹಕಾರದೊಂದಿಗೆ ಇತ್ಯರ್ಥಪಡಿಸಲಾಗುತ್ತದೆ ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಮಲ್ಲೇಶ ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ. ಸಂ. 08354-236200, 295170ಗೆ ಸಂಪರ್ಕಿಸಬಹುದಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net