

ಬೆಂಗಳೂರು: ಬೊಮ್ಮನಹಳ್ಳಿ ವಲಯದ ಬಿಬಿಎಂಪಿ ಕಂದಾಯ ಕಚೇರಿಯಲ್ಲಿ ಆ.೧೦ ರಂದು ಬೆಳಗ್ಗೆ ೧೧.೩೦ ಕ್ಕೆ ನಗರ ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕ(ಎಸ್.ಪಿ) ಕುಂದು ಕೊರತೆ ಸಭೆಯನ್ನು ಏರ್ಪಡಿಸಿದ್ದು, ಸರ್ಕಾರಿ ಕಚೇರಿಗಳಲ್ಲಿ ಕೆಲಸ ಕಾರ್ಯ ಮಾಡಿಕೊಡಲು ಅನಗತ್ಯ ವಿಳಂಬ ಮಾಡುತ್ತಿದ್ದಲ್ಲಿ ಅಥವಾ ಇತರೆ ಸಮಸ್ಯೆಗಳಿದ್ದಲ್ಲಿ ಸಭೆಗೆ ಹಾಜರಾಗಿ ದೂರುಗಳನ್ನು ಸಲ್ಲಿಸಬಹುದಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.