

ಬೆಳಗಾವಿ : ಹೆಸ್ಕಾಂ ಅಥಣಿ ವಿಭಾಗದಲ್ಲಿ ಕೋಟ್ಯಂತರ ಅವ್ಯವಹಾರ ಹೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಬುಧವಾರ ದಾಳಿ ನಡೆಸಿದ್ದಾರೆ.
ಬೆಳಗಾವಿಯ ರಾಮತಿರ್ಥ ನಗರದಲ್ಲಿರುವ ಹೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಶೇಖರ್ ಬಹುರೂಪಿ ಅವರ ಮನೆ, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಹಿಂದೆ 2019 ರಲ್ಲಿ ಅಥಣಿ ಹೆಸ್ಕಾಂ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಕೋಟ್ಯಾಂತರ ರೂ ಅವ್ಯವಹಾರ ಮಾಡಿ ಅಮಾನತುಗೊಂಡಿದ್ದರು. ಸಧ್ಯ ಹರಪನಹಳ್ಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.