ಸವದತ್ತಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

karnataka-lokayukta.jpg
Published on


ಬೆಳಗಾವಿ:  ಸವದತ್ತಿ ತಾಪಂ ಕಾರ್ಯಾಲಯ ಸಭಾಂಗಣದಲ್ಲಿ ಜು.12ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಲೋಕಾಯುಕ್ತ ಅಧಿಕಾರಿಗಳ ಜನ ಸಂಪರ್ಕ ಸಭೆ ಜರುಗಲಿದೆ.ಅರ್ಜಿ ಸಲ್ಲಿಸಲು ಇಚ್ಛಿಸುವವರು ನಿಗದಿತ ನಮೂನೆಯ ಅರ್ಜಿಯೊಂದಿಗೆ ಹಾಜರಿರಬೇಕು.
ಸರ್ಕಾರಿ ಅಧಿಕಾರಿಗಳು ಕೆಲಸ ಮಾಡಿಕೊಡುವಲ್ಲಿ ಹಣಕ್ಕೆ ಬೇಡಿಕೆ ಇಟ್ಟಲ್ಲಿ, ಒತ್ತಾಯಿಸಿದಲ್ಲಿ ಅಥವಾ ಸರ್ಕಾರಿ ಅಧಿಕಾರಿಯ ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ಮಾಹಿತಿ ಇದ್ದಲ್ಲಿ, ಲೋಕಾಯುಕ್ತ ಅಕಾರಿಗಳೊಂದಿಗೆ ನೇರವಾಗಿ ಗುಪ್ತವಾಗಿ ಮಾಹಿತಿ ನೀಡಿ ಸಭೆಯ ಸದುಪಯೋಗ ಪಡಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂ.0831-2950756 ಅಥವಾ 0831-2421922, ಸಂಪರ್ಕಿಸಬಹುದಾಗಿದೆ ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net