ಲಂಚಕ್ಕೆ ಕೈಯೊಡ್ಡಿದ್ದ ಶಾಲಾ ಸಂಚಾಲಕಿ ಲೋಕಾ ಬಲೆಗೆ

loka
Published on

ಮಂಗಳೂರು: ನಿವೃತ್ತಿಯಾಗುತ್ತಿರುವ ಮುಖ್ಯ ಶಿಕ್ಷಕಿಯ ದಾಖಲೆಗಳಿಗೆ ಸಹಿ ಮಾಡಲು 5ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣಕ್ಕೆ ಶಾಲಾ ಸಂಚಾಲಕಿಯೊಬ್ಬರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.


ಬಜಪೆ ಶ್ರೀ ನಿರಂಜನ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಂಚಾಲಕಿ ಜ್ಯೋತಿ ಪೂಜಾರಿ ಲೋಕಾಯಕ್ತ ಬಲೆಗೆ ಬಿದ್ದ ಆರೋಪಿ.
ಅದೇ ಶಾಲೆಯಲ್ಲಿ ಶಿಕ್ಷಕಿಯಾಗಿ, ಮುಖ್ಯ ಶಿಕ್ಷಕಿಯಾಗಿದ್ದ ಶೋಭಾರಾಣಿ ಅವರ ನಿವೃತ್ತಿ ಹಾಗೂ ಉಪದಾನ ದಾಖಲೆಗಳಿಗೆ ಶಾಲಾ ಸಂಚಾಲಕರು ಸಹಿ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿಗೆ ನೀಡಬೇಕಾಗಿತ್ತು. ಈ ದಾಖಲೆಗೆ ಸಹಿ ಹಾಕಲು 5ಲಕ್ಷ ರೂ. ಲಂಚದ ಬೇಡಿಕೆಯಿಟ್ಟಿದ್ದರು. ಈ ಬಗ್ಗೆ ಮಾಹಿತಿ ಪಡೆದ ಲೋಕಾಯುಕ್ತ ಪೊಲೀಸರು ಜು.7ರಂದು ಆರೋಪಿ 5 ಲಕ್ಷ ರೂ.ಗಳನ್ನು ಸ್ವೀಕರಿಸುತ್ತಿದ್ದ ಸಂದರ್ಭ ದಾಳಿ ನಡೆಸಿ ಬಂಧಿಸಿದ್ದಾರೆ.


ಲೋಕಾಯುಕ್ತ ಎಸ್ಪಿ ಸೈಮನ್ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಚೆಲುವರಾಜ್, ಇನ್‌ಸ್ಪೆಕ್ಟರ್ ಕಲಾವತಿ, ವಿನಾಯಕ ಬಿಲ್ಲವ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net