

ಚಿಕ್ಕಮಗಳೂರು: ಕರ್ತಿಕೆರೆ ಗ್ರಾಪಂ ಉಪಾಧ್ಯಕ್ಷರಾಗಿ ಲೋಕೇಶ್.ಬಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗ್ರಾಪಂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಲೋಕೇಶ್ ಮಾತ್ರ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ರಂಗನಾಥ್ ಲೋಕೇಶ್ ಅವರ ಅವಿರೋಧ ಆಯ್ಕೆ ಘೋಷಿಸಿದರು.
ಸಫಾಯಿ ಕರ್ಮಾಚಾರಿ ನಿಗಮದ ಮಾಜಿ ಅಧ್ಯಕ್ಷ ಕೆ.ಪಿ.ವೆಂಕಟೇಶ್ ಮಾರನಾಡಿ, ಗ್ರಾಪಂ ಸದಸ್ಯರು ಹಾಗೂ ಅಧಿಕಾರಿಗಳನ್ನು ವಿಶ್ವಾಸಕ್ಕೆ ಪಡೆದು ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ಗ್ರಾಪಂನ್ನು ಮಾದರಿಯಾಗಿಸಬೇಕು ಎಂದರು.
ಗ್ರಾಪಂ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು, ಗ್ರಾಮಸ್ಥರು ಸಮಸ್ಯೆಗಳನ್ನು ತಂದಾಗ ಮೊದಲು ಗೌರವಯುತವಾಗಿ ಮಾತನಾಡಿಸುವ ಜತೆಗೆ ಅವರ ಸಮಸ್ಯೆ ಪರಿಹರಿಸಲು ಕ್ರಮಕೈಗೊಳ್ಳಬೇಕು. ಅಭಿವೃದ್ಧಿ ಕೆಲಸಗಳಿಗೆ ಬಿಜೆಪಿ ಪಕ್ಷದ ಮುಖಂಡರು ಸದಾ ನಿಮ್ಮೊಂದಿಗೆ ಇರುತ್ತಾರೆ. ಎಲ್ಲರೂ ಒಗ್ಗಟ್ಟಿನಿಂದ ಗ್ರಾಪಂಗೆ ಒಳ್ಳೆಯ ಹೆಸರು ತರಬೇಕು ಎಂದರು.
ಜಿಪಂ ಮಾಜಿ ಸದಸ್ಯ ಸೋಮಶೇಖರ್ ಮಾತನಾಡಿ, ಸರ್ಕಾರದ ಯೋಜನೆಗಳು ಸಮಾಜದ ಕಟ್ಟಕಡೆ ವ್ಯಕ್ತಿಗೂ ತಲುಪಬೇಕು. ಗ್ರಾಮಗಳಲ್ಲಿನ ಕುಡಿಯುವ ನೀರು, ಬೀದಿ ದೀಪ ಸಮಸ್ಯೆ, ಸ್ವಚ್ಚತೆಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಕರ್ತಿಕೆರೆ ಗ್ರಾಪಂ ಅಧ್ಯಕ್ಷೆ ಆಶಾರಾಣಿ ಗುರುಸ್ವಾಮಿ ಮಾತನಾಡಿ, ಗ್ರಾಮ ಪಂಚಾಯಿತಿ ಅಭಿವೃದ್ಧಿಯ ಜತೆಗೆ ಗ್ರಾಮಗಳ ಅಭಿವೃದ್ಧಿಗೆ ಆದ್ಯತೆ ನೀಡಿ ಕಾರ್ಯ ನಿರ್ವಹಿಸಲಾಗುವುದು ಎಂದರು.
ಗ್ರಾಪಂ ಉಪಾಧ್ಯಕ್ಷ , ತಾಪಂ ಮಾಜಿ ಅಧ್ಯಕ್ಷರಾದ ಕನಕರಾಜ್ ಅರಸ್, ನೆಟ್ಟೆಕೆರೆಹಳ್ಳಿ ಜಯಣ್ಣ, ಎಪಿಎಂಸಿ ಮಾಜಿ ಅಧ್ಯಕ್ಷ ರಾಜೀವ್, ಬಿಜೆಪಿ ನಗರಾಧ್ಯಕ್ಷ ಪುಷ್ಪರಾಜ್, ಪ್ರಮುಖರಾದ ಜಯವರ್ಧನ್, ನಿಂಗೇಗೌಡ, ಹೇಮರಾಜ್,ಯತೀಶ್, ಪುಟ್ಟಸ್ವಾಮಿ ಶೆಟ್ಟಿ, ಮೋಹನ್, ಗಣೇಶ್ ರಾಜ್ ಅರಸ್, ರೇಣುಕಾ, ಚಂದ್ರಶೇಖರ್ ರಾಜ್ ಅರಸ್, ಹೇಮಾವತಿ ಕೃಷ್ಣರಾಜ್ ಅರಸ್, ಭಾಗ್ಯ, ಪಾರ್ವತಮ್ಮ, ಸಿದ್ಧರಾಮೇಶ್ವರ, ನೇತ್ರ, ನಾಗೇಶ್, ರೇಖಾ, ಲೋಕೇಶ್, ಸೌಮ್ಯ ಮತ್ತಿತರರಿದ್ದರು.