ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮಾಹಿತಿ

30 Dwd 1 (Divya Prabhu)
Published on

ಧಾರವಾಡ: ಲೋಕಸಭೆಗೆ ಮೇ ೭ರಂದು ಮತದಾನ ನಡೆದಿದ್ದು, ಜೂ. ೪ರಂದು ಮತ ಎಣಿಕೆ ನಡೆಯಲಿದೆ. ರಾಜಕೀಯ ಪಕ್ಷಗಳ ಮತ್ತು ಪಕ್ಷೇತರ ಅಭ್ಯರ್ಥಿಗಳು, ಚುನಾವಣಾ ಏಜಂಟರು, ಮತ ಏಣಿಕೆ ಏಜಂಟರು ಕಡ್ಡಾಯವಾಗಿ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಚುನಾವಣಾ ಅಽಕಾರಿ ಹಾಗೂ ಜಿಲ್ಲಾಽಕಾರಿ ದಿವ್ಯ ಪ್ರಭು ಹೇಳಿದರು.
ತಮ್ಮ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಮತ ಏಣಿಕೆ ಪ್ರಕ್ರಿಯೆ ಕುರಿತು ಅಭ್ಯರ್ಥಿಗಳ ಮತ್ತು ರಾಜಕೀಯ ಪಕ್ಷಗಳ ಪ್ರತಿನಿಽಗಳ ಸಭೆಯಲ್ಲಿ ಅವರು ಮಾತನಾಡಿದರು.
ಮತ ಎಣಿಕೆ ಕೇಂದ್ರದ ಸುತ್ತ ೨೦೦ ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಅನಗತ್ಯ ಓಡಾಟ, ಗುಂಪು ಸೇರುವುದು ಮಾಡುವಂತಿಲ್ಲ. ಏಣಿಕೆ ಕೇಂದ್ರದೊಳಗೆ ಮೊಬೈಲ್ ಸೇರಿ ಯಾವುದೇ ಇಲೆಕ್ಟಾçನಿಕ್ ವಸ್ತು ತರುವಂತಿಲ್ಲ. ಆಯುಧ, ಗುಟಕಾ, ಬೀಡಿ ಸಿಗರೇಟ್, ಎಲೆ ಅಡಿಕೆಯನ್ನು ನಿರ್ಬಂಽಸಲಾಗಿದೆ ಎಂದರು.
ಮಹಾನಗರ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಮಾತನಾಡಿ, ವಾಹನ ಪಾರ್ಕಿಂಗ್ ಸ್ಥಳ, ಪೊಲೀಸ್ ಪರಿಶೀಲನಾ ಸ್ಥಳಗಳು ಹಾಗೂ ಬಂದೊಬಸ್ತ್ ಬಗ್ಗೆ ವಿವರಿಸಿದರು.
ಅಪರ ಜಿಲ್ಲಾಽಕಾರಿ ಗೀತಾ ಸಿ.ಡಿ., ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಹುಡಾ ಆಯುಕ್ತ ಡಾ. ಸಂತೋಷ ಬಿರಾದಾರ, ಸ್ಮಾರ್ಟ್ ಸಿಟಿ ಜಂಟಿ ವ್ಯವಸ್ಥಾಪಕ ಅಜೀಜ್ ದೇಸಾಯಿ ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಽಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net