

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಪ್ರಥಮ ಬಾರಿಗೆ ಮೇ 12ರಂದು ಬೆಳಗ್ಗೆ 11 ಗಂಟೆಗೆ ಭಗವಾನ್ ಬುದ್ಧ ಜಯಂತಿಯನ್ನು ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಭವನದಲ್ಲಿ ಆಯೋಜಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಯಂತಿ ಕಾರ್ಯಕ್ರಮವನ್ನು ಅರ್ಥಗಭಿರ್ತವಾಗಿ ಆಚರಿಸೋಣ. ಅಂದು ಬೆಳಗ್ಗೆ 9 ಗಂಟೆಗೆ ಕಲಾಭವನ ಆವರಣದಲ್ಲಿನ ಅಶೋಕ ಸ್ತಂಭಕ್ಕೆ ಪೂಜೆ ಸಲ್ಲಿಸಿ, ನಂತರ ಭಗವಾನ್ ಬುದ್ಧರ ಭಾವಚಿತ್ರದ ಮೆರವಣಿಗೆಯನ್ನು ಆಲೂರು ವೆಂಕಟರಾವ್ ಭವನದವರೆಗೆ ನಡೆಯಲಿದೆ ಎಂದರು.
ಸಮಾಜದ ಹಿರಿಯರು, ಮುಖಂಡರು, ಇತರರು ಇದ್ದರು. ಕುಮಾರ ಬೆಕ್ಕೇರಿ ಸ್ವಾಗತಿಸಿದರು.