

ವಿಜಯಪುರ : ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸತಿ ಇಲಾಖೆಗಳ ಸಹಯೋಗದಲ್ಲಿ ಮೇ 12 ರಂದು ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ಮುಂದಿನ ಅಂಬೇಡ್ಕರ್ ಭವನದಲ್ಲಿ ಭಗವಾನ್ ಬುದ್ಧ ಜಯಂತಿ ನಡೆಯಲಿದೆ.
ಅಂದು ಬೆಳಗ್ಗೆ 8.30ಕ್ಕೆ ನಗರದ ಬುದ್ಧ ವಿಹಾರದಿಂದ ಅಂಬೇಡ್ಕರ್ ಭವನದವರೆಗೆ ಭಗವಾನ್ ಬುದ್ಧ ಭಾವಚಿತ್ರ ಮೆರವಣಿಗೆ ಹಾಗೂ ಬೆಳಗ್ಗೆ 10ಕ್ಕೆ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಉದ್ಘಾಟಿಸುವರು. ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸುವರು.
ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ವಿ.ಪ. ವಿರೋಧ ಪಕ್ಷದ ಮುಖ್ಯ ಸಚೇತಕ ರವಿಕುಮಾರ್ ಎನ್., ನವದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ, ಕೆಎಸ್ ನಿಗಮದ ಅಧ್ಯಕ್ಷ, ಶಾಸಕ ಅಪ್ಪಾಜಿ ನಾಡಗೌಡ, ಸಂಸದ ರಮೇಶ ಜಿಗಜಿಣಗಿ, ರಾಜ್ಯಸಭಾ ಸದಸ್ಯೆ ಡಾ. ಸುಧಾ ಮೂರ್ತಿ, ಶಾಸಕರಾದ ಯಶವಂತರಾಯಗೌಡ ಪಾಟೀಲ, ವಿಠ್ಠಲ ಕಟಕಧೋಂಡ, ರಾಜುಗೌಡ ಪಾಟೀಲ, ಅಶೋಕ ಮನಗೂಳಿ, ವಿ.ಪ. ಸದಸ್ಯರಾದ ಹಣಮಂತ ನಿರಾಣಿ, ಸುನೀಲಗೌಡ ಪಾಟೀಲ, ಪಿ.ಎಚ್. ಪೂಜಾರ, ಕೇಶವ ಪ್ರಸಾದ ಎಸ್, ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷ ಕಾಂತಾ ನಾಯ್ಕ, ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ವಿಡಿಎ ಅಧ್ಯಕ್ಷ ಕನಾನ್ ಮುಶ್ರೀಫ್ ಹಾಗೂ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಇಲಿಯಾಸ್ ಬೋರಾಮಣಿ ಆಗಮಿಸುವರು. ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿಪಂ ಸಿಇಒ ರಿಷಿ ಆನಂದ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ$್ಮಣ ನಿಂಬರಗಿ ಉಪಸ್ಥಿತಿ ವಹಿಸುವರು.
ಅನ್ನಪೂರ್ಣ ಬೆಳ್ಳೆನ್ನವರ ವಿಶೇಷ ಉಪನ್ಯಾಸ ನೀಡುವರು ಎಂದು ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.