ಲೀಲೆಗಳ ಮೂಲಕ ಅಂಕು-ಡೊಂಕು ತಿದ್ದಿದವ :ಸಿರಿಬಾಗಿಲು ರಾಮಕೃಷ್ಣ ಮಯ್ಯ ವಿಶ್ಲೇಷಣೆ

Bdk_Krishna-Leele-1
Published on

ಮಧೂರು: ಜಗತ್ತಿಗೆ ಮಾರ್ಗದರ್ಶಕನಾದ ಶ್ರೀಕೃಷ್ಣ ಪರಮಾತ್ಮ ತನ್ನ ಲೀಲೆಗಳ ಮೂಲಕ ಸಮಾಜದ ಅಂಕುಡೊಂಕು ತಿದ್ದಿದ ಎಂದು ಧರ್ಮಸ್ಥಳ ಮೇಳದ ಪ್ರಧಾನ ಭಾಗವತ, ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ರಾಮಕೃಷ್ಣ ಮಯ್ಯ ಸಿರಿಬಾಗಿಲು ಹೇಳಿದರು.

ಕುತ್ಯಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಜರುಗಿದ ಅಷ್ಟಮಿ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ದೇವಸ್ಥಾನದ ಆನುವಂಶಿಕ ಮೊಕ್ತೇಸರ ಕೆ.ಜಿ.ಶ್ಯಾನುಭೋಗ್ ಅಧ್ಯಕ್ಷತೆ ವಹಿಸಿದರು. ಡಾ.ಉದಯ ಕುಮಾರ್ ಕೂಡ್ಲು ಬಳಗದವರಿಂದ ಸ್ಯಾಕ್ಸೋಫೋನ್ ವಾದನ, ಪ್ರಸಿದ್ಧ ಕಲಾವಿದರಿಂದ ಯಕ್ಷ ಗಾನಾರ್ಚನೆ ನಡೆಯಿತು. ಊರಿನ ವಿವಿಧ ಭಾಗಗಳಿಂದ ಮುದ್ದು ಕೃಷ್ಣ-ರಾಧೆ ವೇಷಧಾರಿಗಳ ಆಕರ್ಷಕ ಮೆರವಣಿಗೆ ಮೂಲಕ ಸಾಗಿ ಬಂದು ದೇವಸ್ಥಾನದಲ್ಲಿ ವೇಷ ಪ್ರದರ್ಶನ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.

ಮಾಲತಿ ಜಗದೀಶ್ ಸ್ವಾಗತಿಸಿದರು. ವೇಣುಗೋಪಾಲ್ ಮಾಸ್ತರ್ ಕೂಡ್ಲು ವಂದಿಸಿದರು. ಕೆ.ಜಗದೀಶ್ ಕೂಡ್ಲು ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net