ಭಗವಾನ್ ಶ್ರೀಕೃಷ್ಣ ಜಯಂತಿ 26ರಂದು

e79b7ff1599c7aa13a5fd6495610c88a
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಭಗವಾನ್ ಶ್ರೀಕೃಷ್ಣ ಜಯಂತಿಯನ್ನು ಆ. 26ರಂದು ಬೆಳಗ್ಗೆ 11 ಗಂಟೆಗೆ ನಗರದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಗೌರವ ಉಪಸ್ಥಿತರಿವರು. ಕಾರ್ಮಿಕ ಸಚಿವ ಸಂತೋಷ ಲಾಡ್ ಉದ್ಘಾಟಿಸುವರು. ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಭಾಗವಹಿಸುವರು. ನಿವೃತ್ತ ಶಿಕ್ಷಕ ಎಚ್. ಪರಮೇಶ್ವರಪ್ಪ ವಿಶೇಷÀ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net