ರಾತ್ರಿ ನೆಮ್ಮದಿಯ ನಿದ್ರೆಯಲ್ಲಿದ್ದ ಮಹಿಳೆಗೆ ಜವರಾಯನಂತೆ ಬಂದ ಲಾರಿ

Lorry
Published on

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮನೆಗೆ ನುಗ್ಗಿದ ಪರಿಣಾಮ ಮಹಿಳೆಯೊಬ್ಬಳು ಸಾವಿಗೀಡಾಗಿರುವ ಘಟನೆ ನಡೆದಿದೆ.

ರುದ್ರಮ್ಮ (62) ಮೃತ ದುರ್ದೈವಿ. ಲಾರಿ ಮನೆಗೆ ನುಗ್ಗಿದ ರಭಸಕ್ಕೆ ಗೋಡೆ ಬಿದ್ದು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಹೊಸದುರ್ಗ ತಾಲೂಕಿನ ಜಾನಕಲ್ ಗ್ರಾಮದಲ್ಲಿ ಘಟನೆ ನಡೆದಿದೆ.

ತಡರಾತ್ರಿ ಹೊಸದುರ್ಗ ಕಡೆಯಿಂದ ಬಂದ ಲಾರಿ ರುದ್ರಮ್ಮನ ಮನೆಗೆ ಡಿಕ್ಕಿ ಹೊಡೆದು ನುಗ್ಗಿದೆ. ಇದರ ಬೆನ್ನಲ್ಲೇ ಚಾಲಕ ಸ್ಥಳದಲ್ಲಿಯೇ ಲಾರಿ ಬಿಟ್ಟು ಪರಾರಿಯಾಗಿದ್ದಾನೆ.

ಘಟನಾ ಸ್ಥಳಕ್ಕೆ ಹೊಸದುರ್ಗ ಠಾಣಾ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಚಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net