ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಬೈಕ್, ಸಂಚಾರ ಠಾಣೆಯಲ್ಲಿ ಕೆಲಸ ಮಾಡ್ತಿದ್ದ ಸವಾರ ಸ್ಥಳದಲ್ಲೇ ಸಾವು..

Accident
Published on

ನೆಲಮಂಗಲ: ರಸ್ತೆ ಬದಿ ನಿಂತಿದ್ದ ಕಂಟೇನರ್ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದು, ಸಂಚಾರ ಠಾಣೆಯಲ್ಲಿ ಕೆಲಸ ಮಾಡ್ತಿದ್ದ ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ.

ನೆಲಮಂಗಲ ನಿವಾಸಿ ಮಂಜುನಾಥ (39) ಸಾವಿಗೀಡಾದ ಬೈಕ್ ಸವಾರ. ತುಮಕೂರು ರಸ್ತೆಯ ಮಾದನಾಯಕನಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ. ಇವರು ಬೆಂಗಳೂರಿನಿಂದ ನೆಲಮಂಗಲ ಕಡೆಗೆ ಪ್ರಯಾಣ ಮಾಡುತ್ತಿದ್ದಾಗ ಬೈಕ್ ಡಿಕ್ಕಿ ಹೊಡೆದಿದೆ.

ಮಂಜುನಾಥ್ ಈ ಹಿಂದೆ ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು. ಬಳಿಕ ಹೋಂಗಾರ್ಡ್ ಆಗಿ ಬೆಂಗಳೂರಿನ ಮೆಟ್ರೋದಲ್ಲಿ ಕೆಲಸ ಮಾಡಲಾರಂಭಿಸಿದ್ದರು. ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net