

ಮಂಡ್ಯ: ಲಾರಿಯೊಂದು ಮೂರು ಎತ್ತಿನಗಾಡಿಗಳಿಗೆ ಡಿಕ್ಕಿ ಹೊಡೆದಿದ್ದು, ಐದು ಎತ್ತುಗಳು ಸ್ಥಳದಲ್ಲೇ ಸಾವಿಗೀಡಾಗಿವೆ. ಮತ್ತೊಂದೆಡೆ ಮೂವರು ರೈತರು ಮತ್ತು ಒಂದು ಎತ್ತಿಗೆ ಗಾಯಗಳಾಗಿವೆ. ಮಂಡ್ಯ ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದೆ.
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಹದೇವಪುರದಲ್ಲಿ ಈ ಅಪಘಾತ ಸಂಭವಿಸಿದೆ. ನಾಗಮಂಗಲ ಕಡೆಯಿಂದ ತರಕಾರಿ ತುಂಬಿಕೊಂಡು ಬರುತ್ತಿದ್ದ ಲಾರಿ, ಚಾಮರಾಜನಗರ-ಜೇವರ್ಗಿ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಎತ್ತಿನಗಾಡಿಗಳಿಗೆ ಡಿಕ್ಕಿ ಹೊಡೆದಿದೆ. ಅಪಘಾತವಾದ ತಕ್ಷಣ ಲಾರಿ ಚಾಲಕ ಪರಾರಿಯಾಗಿದ್ದಾನೆ.
ಈ ಅಪಘಾತದಲ್ಲಿ ಮೂವರು ರೈತರಿಗೆ ಮತ್ತು ಒಂದು ಎತ್ತಿಗೂ ಗಾಯಗಳಾಗಿವೆ. ಅಪಘಾತಕ್ಕೆ ಸಂಬಂಧಿಸಿದಂತೆ ರೈತರು ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಣಾಮವಾಗಿ ಕಿಲೋಮೀಟರ್ಗಟ್ಟಲೆ ಸಂಚಾರ ದಟ್ಟಣೆ ಉಂಟಾಗಿತ್ತು. ಪಾಂಡವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.