ಲಾರಿ ಮತ್ತು ಸಾರಿಗೆ ಸಂಸ್ಥೆ ಬಸ್ ನಡುವೆ ಭೀಕರ ಅಪಘಾತ: 10 ಪ್ರಯಾಣಿಕರಿಗೆ ಗಾಯ

Lorry KSRTC Bus Accident Yadgiri 13 FEB 20
Published on

ಯಾದಗಿರಿ: ಶಹಪುರ ತಾಲೂಕಿನ ಭೀಮರಡಯನ ಗಡಿಯ ರಾಜ್ಯ ಹೆದ್ದಾರಿಯಲ್ಲಿ ಗುರುವಾರ ಲಾರಿ ಮತ್ತು ಸಾರಿಗೆ ಸಂಸ್ಥೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ದುರಂತದಲ್ಲಿ 10 ಪ್ರಯಾಣಿಕರು ಗಾಯಗೊಂಡಿದ್ದಾರೆ.

ಅಪಘಾತಕ್ಕೀಡಾದ ಬಸ್​ನ ಒಂದು ಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಯಾವುದೇ ಸಾವುನೋವು ಸಂಭವಿಸಿಲ್ಲ. ಘಟನೆಯಲ್ಲಿ ಗಾಯಗೊಂಡವರನ್ನು ಶಹಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತ ಸ್ಥಳದಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ವಾಹನಗಳ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು. ಬಸ್ ಚಾಲಕನ ಅಜಾಗರೂಕತೆಯಿಂದ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು, ಚಾಲಕನ ವಿರುದ್ದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭೀಮರಾಯ ಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net