ಲಾರಿ-ಕಾರು ಡಿಕ್ಕಿ: ಮಹಿಳೆ ಸಾವು, ಮಗು ಪರಿಸ್ಥಿತಿ ಗಂಭೀರ

Car
Published on

ಆನೇಕಲ್: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಮಹಿಳೆಯೊಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಮಗು ಪರಿಸ್ಥಿತಿ ಗಂಭೀರವಾಗಿದೆ.

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹೊಸೂರು ಮುಖ್ಯರಸ್ತೆಯ ತಿರುಮಗೊಂಡನಹಳ್ಳಿ ಗೇಟ್ ಬಳಿ ಇಂದು ಮುಂಜಾನೆ ಈ ಅಪಘಾತ ಸಂಭವಿಸಿದೆ.

ಫೋರ್ಡ್​ ಕಾರು ತಮಿಳುನಾಡಿನಿಂದ ಬೆಂಗಳೂರು ಕಡೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ನಿದ್ದೆ ಮಂಪರಿನಲ್ಲಿ ಮುಂದೆ ಸಾಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜುಗೊಂಡಿದೆ.

ಅಪಘಾತದಲ್ಲಿ ತಮಿಳುನಾಡು ಮೂಲದ ದಿವ್ಯಾ (32) ಸಾವಿಗೀಡಾಗಿದ್ದು, ಮೂರು ವರ್ಷದ ಮಗು ಅಭಿನವ್ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡ ಮಗುವಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net