ಮದಕರಿಪುರದ ಬಳಿ ಬೈಕ್‌ಗೆ ಲಾರಿ ಡಿಕ್ಕಿ, ಸವಾರ ಸಾವು

accident logo
Published on

ಚಿತ್ರದುರ್ಗ: ಬೈಕ್‌ಗೆ ಲಾರಿ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಧಾರುಣ ಘಟನೆ ಭಾನುವಾರ ಮಧ್ಯಾಹ್ನ ನಗರದ ಹೊರವಲಯ ಮದಕರಿಪುರದ ಬಳಿ ನಡೆದಿದೆ.

ಮದಕರಿಪುರದ ನರಸಿಂಹಸ್ವಾಮಿ (18) ಮೃತ ಯುವಕ. ಮಧ್ಯಾಹ್ನ ಹೊಲಕ್ಕೆ ಊಟ ತೆಗೆದುಕೊಂಡು ಹೋಗುತ್ತಿದ್ದಾಗ ಚಳ್ಳಕೆರೆ ಕಡೆಗೆ ಹೋಗುತ್ತಿದ್ದ ಲಾರಿ, ಬೈಕ್‌ನ ಹಿಂಬದಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಅದೇ ವೇಳೆ ಚಳ್ಳಕೆರೆಯಿಂದ ಚಿತ್ರದುರ್ಗಕ್ಕೆ ಬರುತ್ತಿದ್ದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರು, ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನರಸಿಂಹಸ್ವಾಮಿಯನ್ನು ತಕ್ಷಣ ಆಸ್ಪತ್ರೆಗೆ ಕಳಿಸಲು ಪ್ರಯತ್ನಿಸಿದರಾದರೂ ಪ್ರಯೋಜನವಾಗಲಿಲ್ಲ. ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net