ಲಾರಿ ಡಿಕ್ಕಿಯಾಗಿ ಒಬ್ಬ ಸಾವು, ಮತ್ತೊಬ್ಬ ಗಂಭೀರ

Crime Logo
Published on

ರಾಣೆಬೆನ್ನೂರ: ಲಾರಿ ಡಿಕ್ಕಿ ಹೊಡೆದ ಪರಿಣಾಮ ಟ್ರಾ$್ಯಕ್ಟರ್​ನ ಚಾಲಕ ಸ್ಥಳದಲ್ಲಿಯೆ ಮೃತಪಟ್ಟು ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಮಾದರಾಯನಪುರ ಗ್ರಾಮದ ಬಳಿ ಭಾನುವಾರ ನಡೆದಿದೆ.

ಹಾವೇರಿ ತಾಲೂಕಿನ ನೆಗಳೂರು ಗ್ರಾಮದ ಪರಶುರೆಡ್ಡಿ ಲಕ್ಷ$್ಮಣರೆಡ್ಡಿ ಮೈದೂರ ಮೃತ ವ್ಯಕ್ತಿ. ಈತನ ಪಕ್ಕ ಕುಳಿತ್ತಿದ್ದ ವೀರುಪಾಕ್ಷಪ್ಪ ಪತ್ರಿ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇವರು ರಾಣೆಬೆನ್ನೂರ ಕಡೆಯಿಂದ ಗುತ್ತಲ ಕಡೆಗೆ ತೆರಳುತ್ತಿದ್ದ ಸಮಯದಲ್ಲಿ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಇದರಿಂದ ಚಾಲಕ ಪರಶುರೆಡ್ಡಿ ಸ್ಥಳದಲ್ಲಿಯೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net