ವಿದ್ಯಾರ್ಥಿನಿಯ ಅತ್ಯಾಚಾರ ಆರೋಪಿ ಮೀನಿನ ಲಾರಿ ಚಾಲಕ ಬಂಧನ

Arrest Kaidhi
Published on

ಮಂಗಳೂರು: ಸುರತ್ಕಲ್ ಎನ್‌ಐಟಿಕೆ ಬೀಚ್‌ನಲ್ಲಿ ಜು.27ರಂದು ವಿದ್ಯಾರ್ಥಿನಿಯೋರ್ವಳ ಮೇಲೆ ಅತ್ಯಾಚಾರವೆಸಗಿದ ಆರೋಪಿ ಮುನಾಜ್ ಅಹಮ್ಮದ್(30) ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ.

ಸ್ಥಳೀಯ ನಿವಾಸಿಯಾಗಿರುವ ಈತ ಈತ ಮೀನು ಸಾಗಾಟದ ಲಾರಿಯಲ್ಲಿ ಚಾಲಕನಾಗಿದ್ದ. ಜು.27ರಂದು ಮಧ್ಯಾಹ್ನ ವಿದ್ಯಾರ್ಥಿನಿ ತನ್ನ ಸಹಪಾಠಿ ಹುಡುಗನ ಜತೆ ಬೀಚ್‌ನಲ್ಲಿದ್ದಾಗ ಅಲ್ಲಿಗೆ ಬಂದ ಆರೋಪಿ ಮುನಾಜ್, ಅವರ ಪೊಟೋ ತೆಗೆದು, ವೀಡಿಯೋ ಚಿತ್ರೀಕರಣ ಮಾಡಿ ಬೆದರಿಕೆ ಹಾಕಿದ್ದ. ಸಹಪಾಠಿ ಹುಡುಗನನ್ನು ಅಲ್ಲಿಂದ ಓಡಿಸಿ, ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾನೆ. ಅದರ ಬಳಿಕವೂ ವಿದ್ಯಾರ್ಥಿನಿಗೆ ಹಲವು ರೀತಿಯಲ್ಲಿ ಕಿರುಕುಳ ನೀಡಿದ್ದಾನೆ.

ಆತನ ಕಿರುಕುಳ ಸಹಿಸಲಾಗದೆ ವಿದ್ಯಾರ್ಥಿನಿ ಪೊಲೀಸ್ ಆಯುಕ್ತರ ಕಚೇರಿಗೆ ಬಂದು ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಮತ್ತೆ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಈತನೊಂದಿಗೆ ಇನ್ಯಾರಾದರೂ ಪ್ರಕರಣದಲ್ಲಿ ಭಾಗಿಯಾಗಿದ್ದಾರಾ ಎನ್ನುವುದರ ಕುರಿತು ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net