ವಿದ್ಯುತ್ ತಂತಿ ತಗುಲಿ ಲಾರಿ ಚಾಲಕ ಸಾವು

15-02-Shiva-9
ಮಾನ್ವಿ ತಾಲೂಕಿನ ಯಡಿವಾಳ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಹಿಟಾಜಿ ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಹತ್ತಿಕೊಂಡಿರುವುದು.
Published on

ರಾಯಚೂರು: ಚಲಿಸುತ್ತಿದ್ದ ಲಾರಿಗೆ ವಿದ್ಯುತ್ ತಂತಿ ತಗುಲಿ ಬೆಂಕಿ ಹತ್ತಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಯಡಿವಾಳ ಗ್ರಾಮದಲ್ಲಿ ಗುರುವಾರ ಜರುಗಿದೆ.
ಮೃತನನ್ನು ಜಾರ್ಖಂಡ್ ಮೂಲದ ಅಜಯಕುಮಾರ (35) ಎಂದು ಗುರುತಿಸಲಾಗಿದೆ. ಲಾರಿಯಲ್ಲಿ ಹಿಟಾಚಿಯನ್ನಿಟ್ಟು ಸ್ಥಳಾಂತರ ಮಾಡುತ್ತಿರುವಾಗ 11ಕೆವಿ ವಿದ್ಯುತ್ ತಂತಿ ತಗುಲಿದ್ದರಿಂದ ಬೆಂಕಿ ಹತ್ತಿಕೊಂಡಿದೆ. ಇದರಿಂದಾಗಿ ಅಜಯಕುಮಾರ ವಿದ್ಯುತ್ ಸಂಪರ್ಕವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದು, ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮೃತ ದೇಹವನ್ನು ಮರಣೋತ್ತಮ ಪರೀಕ್ಷೆಗಾಗಿ ರಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net