ಅರಬೈಲ್ ಘಟ್ಟದಲ್ಲಿ ಗಟಾರಕ್ಕಿಳಿದ ಲಾರಿ

YLP Lory
Published on

ಯಲ್ಲಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ತಾಲೂಕಿನ ಅರಬೈಲ್ ಘಟ್ಟದಲ್ಲಿ ಶುಕ್ರವಾರ ಸಂಭವಿಸಿದೆ.

ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ಸರಕು ತುಂಬಿದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಗಟಾರದಲ್ಲಿ ಉರುಳಿ ಬಿದ್ದಿದೆ. ಲಾರಿ ಜಖಂಗೊಂಡಿದ್ದು, ಚಾಲಕ, ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಕ್ರೇನ್ ಬಳಸಿ ಲಾರಿ ತೆರವುಗೊಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net