ಲಾರಿ ಪಲ್ಟಿಯಾಗಿ ಬಿದ್ದು ಚಾಲಕನಿಗೆ ಗಂಭೀರ ಗಾಯ

14-RNR-04
Published on

ರಾಣೆಬೆನ್ನೂರ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡ ಟನೆ ನಗರದ ಹೊರವಲಯದ ಮಾಗೋಡ ಕ್ರಾಸ್​ ಬಳಿ ಎನ್​ಎಚ್​&48ರಲ್ಲಿ ಬುಧವಾರ ಬೆಳಗಿನ ಜಾವ ನಡೆದಿದೆ.

ಲಾರಿ ಚಾಲಕ ಚೇತನ ಮಲೇಬೆನ್ನೂರ ಗಾಯಗೊಂಡವರು.

ಈತ ಬೆಂಗಳೂರು ಕಡೆಯಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಸಮಯದಲ್ಲಿ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಚೇತನನ್ನು ಚಿಕಿತ್ಸೆಗಾಗಿ ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net