ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

10 ylp 01 (lari)
Published on

ಯಲ್ಲಾಪುರ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ತಾಲೂಕಿನ ಡೊಮಗೇರಿ ಕ್ರಾಸ್ ಬಳಿ ನಡೆದಿದೆ.

ಸರಕು ತುಂಬಿಕೊಂಡು ಹುಬ್ಬಳ್ಳಿ ಕಡೆಯಿಂದ ಯಲ್ಲಾಪುರ ಕಡೆಗೆ ಬರುತ್ತಿದ್ದ ಲಾರಿ, ಡೊಮಗೇರಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಲಾರಿ ಜಖಂಗೊಂಡಿದ್ದು, ಚಾಲಕ, ನಿರ್ವಾಹಕರು ಅಪಾಯದಿಂದ ಪಾರಾಗಿದ್ದಾರೆ. ರಸ್ತೆಯ ಮಧ್ಯೆ ಅಡ್ಡಲಾಗಿ ಲಾರಿ ಬಿದ್ದಿರುವುದರಿಂದ ಕೆಲಕಾಲ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಯಿತು. ಪೊಲೀಸರು ಸ್ಥಳಕ್ಕೆ ಆಗಮಿಸಿ, ಲಾರಿ ತೆರವಿಗೆ ಕ್ರಮ ಕೈಗೊಂಡರು. ನಂತರ ಸಂಚಾರ ವ್ಯವಸ್ಥೆ ಸುಗಮಗೊಂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net