ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

Lorry overturns after driver loses control
ಯಲ್ಲಾಪುರ ತಾಲೂಕಿನ ಘರವಾಸ ಕ್ರಾಸ್ ಬಳಿ ಪಲ್ಟಿಯಾದ ಲಾರಿ
Published on

ಯಲ್ಲಾಪುರ: ಚಾಲಕನ ನಿಯಂತ್ರಣ ತಪ್ಪಿ ಕಂಟೇನರ್ ಲಾರಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63ರ ಮೇಲೆ ತಾಲೂಕಿನ ಇಡಗುಂದಿ ಸಮೀಪದ ಘರವಾಸ ಕ್ರಾಸ್ ಬಳಿ ಸಂಭವಿಸಿದೆ.

ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆಗೆ ಪಾರ್ಸಲ್ ಸಾಗಿಸುತ್ತಿದ್ದ ಕಂಟೇನರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಘರವಾಸ ಕ್ರಾಸ್ ಎದುರು ಗಟಾರದಲ್ಲಿ ಮರವೊಂದಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆಯಲ್ಲಿ ಲಾರಿ ಜಖಂಗೊಂಡಿದ್ದು, ಚಾಲಕ- ನಿರ್ವಾಹಕರು ಅಪಾಯದಿಂದ ಪಾರಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net