ಲಾರಿ ಮಗುಚಿ ಚಾಲಕ ಸಾವು

15 HANUR 3
Published on


ಚಾಮರಾಜನಗರ: ಹನೂರು ತಾಲೂಕಿನ ಗಡಿ ಗರಿಕೆಕಂಡಿ ಚೆಕ್‌ಪೋಸ್ಟ್ ಸಮೀಪ ಮಾರ್ಗಮಧ್ಯೆ ಬುಧವಾರ ತಮಿಳುನಾಡಿಗೆ ಸೇರಿದ ಲಾರಿ ಮಗುಚಿ ಬಿದ್ದು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತೊಬ್ಬ ಗಾಯಗೊಂಡಿದ್ದಾನೆ.


ಕೊಳ್ಳೇಗಾಲದ ನಿವಾಸಿ, ಚಾಲಕ ಜಭಿವುಲ್ಲಾ (35) ಮೃತರು. ಆದರೆ ಗಾಯಗೊಂಡಿರುವ ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದಿಲ್ಲ. ಬೆಳಗಿನ ಜಾವ ಸುಮಾರು 4 ಗಂಟೆ ಸಮಯದಲ್ಲಿ ನಂಜನಗೂಡಿನಿಂದ ತಮಿಳುನಾಡಿಗೆ ಪೇಪರ್ ತುಂಬಿಕೊಂಡು ತೆರಳುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಗೆ ಮಗುಚಿದೆ. ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಗಾಯಾಳು ಸ್ಥಳೀಯ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾನೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ತಮಿಳುನಾಡು ಪೊಲೀಸರು ಆಗಮಿಸಿ ಪರಿಶೀಲಿಸಿ ಮೃತ ದೇಹವನ್ನು ಹಂದಿಯೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಿದರು. ಈ ಸಂಬಂಧ ತಮಿಳುನಾಡು ಬರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net