

ಯಲ್ಲಾಪುರ: ತಾಲೂಕಿನ ಅರಬೈಲ್ ಘಟ್ಟದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾದ ಘಟನೆ ಮಂಗಳವಾರ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ.
ರಾಜಸ್ಥಾನದಿಂದ ಕೇರಳಕ್ಕೆ ಬೆಳ್ಳುಳ್ಳಿ ಸಾಗಿಸುತ್ತಿದ್ದ ಲಾರಿ, ಅರಬೈಲ್ ಘಟ್ಟದಲ್ಲಿ ಸಾಗುವಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಲಾರಿ ಜಖಂಗೊಂಡಿದ್ದು, ಚಾಲಕ-ನಿರ್ವಾಹಕರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಲಾರಿಯಲ್ಲಿದ್ದ ಬೆಳ್ಳುಳ್ಳಿ ಮೂಟೆಗಳು ಹೆದ್ದಾರಿ ಮೇಲೆ ಬಿದ್ದು, ಬೆಳ್ಳುಳ್ಳಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಲಾರಿ ಪಲ್ಟಿಯಾದ ರಭಸಕ್ಕೆ ಲಾರಿಯಲ್ಲಿದ್ದ ಡೀಸೆಲ್ ಸೋರಿಕೆಯಾಗಿದ್ದು, ಇದರಿಂದ ಹೆದ್ದಾರಿ ಹಾಳಾಗಿದೆ.