ಚಾರ್ಮಾಡಿ ಘಾಟಿ ತಿರುವಿನಲ್ಲಿ ಲಾರಿ ಪಲ್ಟಿ

New Project (29)
Published on

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಒಂದನೇ ತಿರುವಿನ ಬಳಿ ಮರ ಸಾಗಾಟದ ಲಾರಿಯೊಂದು ಗುರುವಾರ ಮುಂಜಾನೆ ಪಲ್ಟಿಯಾಗಿದೆ. ಲಾರಿ ಚಾಲಕ ಮತ್ತು ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಒಂದು ತಾಸು ಸಂಚಾರಕ್ಕೆ ಸಮಸ್ಯೆಯಾಯಿತು. ಬೆಳ್ತಂಗಡಿ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಸ್ಥಳೀಯರ ಸಹಕಾರದಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net