ಇಡಗುಂದಿಯಲ್ಲಿ ಲಾರಿ ಪಲ್ಟಿ

ylp lari
Published on

ಯಲ್ಲಾಪುರ: ಸರಕು ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ-63 ಮೇಲೆ ತಾಲೂಕಿನ ಇಡಗುಂದಿ ಶಾಲೆ ಎದುರು ಭಾನುವಾರ ನಡೆದಿದೆ.

ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆಗೆ ಹೊರಟಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಗಟಾರಕ್ಕೆ ಬಿದ್ದಿದೆ. ಲಾರಿ ಜಖಂಗೊಂಡಿದ್ದು, ಚಾಲಕ-ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net