ಪುಂಜಾಲಕಟ್ಟೆಯಲ್ಲಿ ಲಾರಿ ಪಲ್ಟಿ, ಓರ್ವ ಮೃತ್ಯು

Lorry
ಪಲ್ಟಿಯಾದ ಲಾರಿ
Published on

ಬಂಟ್ವಾಳ: ಪುಂಜಾಲಕಟ್ಟೆಯಲ್ಲಿ ಲಾರಿಯೊಂದು ಪಲ್ಟಿಯಾಗಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನೋರ್ವ ಚಿಂತಾಜನಕ ಸ್ಥಿತಿಯಲ್ಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಫರಂಗಿಪೇಟೆ ನಿವಾಸಿ ಕಾರ್ತಿಕ್ ಮೃತಪಟ್ಟವರು. ಶಾಮಿಯಾನ ಅಂಗಡಿಯೊಂದಕ್ಕೆ ಸೇರಿದ ಲಾರಿ ಇದಾಗಿದ್ದು, ಶಾಮಿಯಾನ ಸಾಮಗ್ರಿಗಳನ್ನು ಬೆಳ್ತಂಗಡಿ ಕಡೆಗೆ ಕೊಂಡೊಯ್ಯುತ್ತಿದ್ದ ಸಂದರ್ಭ ಪುಂಜಾಲಕಟ್ಟೆ ಮಂದಿರದ ಬಳಿ ತಿರುವಿನಲ್ಲಿ ಪಲ್ಟಿಯಾಗಿದೆ. ಲಾರಿಯೊಳಗೆ ಸಿಲುಕಿದ್ದ ಯುವಕರನ್ನು ಸ್ಥಳೀಯರು ರಕ್ಷಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net