ಕಳೆದುಹೋಗಿದ್ದ ಐಫೋನ್, ಪರ್ಸ್ ಪತ್ತೆ

mobile (1)
Published on

ಮೈಸೂರು: ಮಹಿಳಾ ಪ್ರಯಾಣಿಕರೊಬ್ಬರು ಕಳೆದುಕೊಂಡಿದ್ದ ಬೆಲೆ ಬಾಳುವ ಐಫೋನ್ ಹಾಗೂ ಪರ್ಸ್‌ಅನ್ನು ಕೆಲವೇ ಗಂಟೆಗಳಲ್ಲಿ ಲಷ್ಕರ್ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ.


ಬೆಂಗಳೂರಿನ ಇಂದಿರಾನಗರ ನಿವಾಸಿ ಲೇಖಾ ಅವರು ಭಾನುವಾರ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ತಮ್ಮ ಮೊಬೈಲ್ ಹಾಗೂ ಪರ್ಸ್ ಕಳೆದುಕೊಂಡಿದ್ದರು. ಈ ಕುರಿತು ಲಷ್ಕರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.


ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿ ಮೊಬೈಲ್ ಫೋನ್ ಹಾಗೂ ಪರ್ಸ್ ಅನ್ನು ವಾರಸುದಾರರಿಗೆ ಹಿಂದಿರುಗಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net