ಅಬ್ಬರ ಹೆಚ್ಚಿಸಿದ ವಿದೇಶಿಗರು

20
Published on

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಉದ್ಘಾಟನೆಗೂ ಮುನ್ನವೇ ಬುಧವಾರ ಆಯೋಜಿಸಿದ್ದ ‘ಸ್ಕಾಲ್ ಇಂಡಿಯಾ ಕಾಂಗ್ರೆಸ್ ಮೆರವಣಿಗೆ’ ರಂಗು ನೀಡಿತು.


ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ಸಹಯೋಗದೊಂದಿಗೆ ಸ್ಕಾಲ್ ಇಂಟರ್‌ನ್ಯಾಷನಲ್ ಇಂಡಿಯಾ ವತಿಯಿಂದ ಆಯೋಜಿಸಿದ್ದ ಸ್ಕಾಲ್ ಇಂಡಿಯಾ ಕಾಂಗ್ರೆಸ್ ಮೆರವಣಿಗೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ವಿವಿಧ ಸಾಂಸ್ಕೃತಿಕ ಕಲಾ ತಂಡಗಳು, ಸಾಂಪ್ರದಾಯಿಕ ಉಡುಪು ಧರಿಸಿ ಭಾಗಿಯಾಗಿದ್ದ ವಿದೇಶಿಗರು ಮೆರವಣಿಗೆಯ ಅಬ್ಬರ ಹೆಚ್ಚುವಂತೆ ಮಾಡಿದರು.


ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಮೆರವಣಿಗೆಗೆ ಆಸ್ಕರ್ ಪ್ರಶಸ್ತಿ ವಿಜೇತ ಎಲಿಫೆಂಟ್ ವಿಸ್ಪರರ್ಸ್ ಖ್ಯಾತಿಯ ಬೊಮ್ಮ ಹಾಗೂ ಬೆಳ್ಳಿ ದಂಪತಿ ಚಾಲನೆ ನೀಡಿದರು. ಪ್ರತಿಯೊಬ್ಬರೂ ಕಲಾ ತಂಡಗಳೊಂದಿಗೆ ಸಾಂಪ್ರದಾಯಿಕ ದಿರಿಸು ಧರಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರಲ್ಲದೆ, ಕುದುರೆ ಸಾರೋಟಿನಲ್ಲಿ ನಗರದ ಪ್ರಮುಖ ರಸ್ತೆಗಳ ಪ್ರದಕ್ಷಿಣೆ ಹಾಕಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net