ಲವ್ ಜಿಹಾದ್ ತಡೆಗೆ ವಿಶೇಷ ಪೊಲೀಸ್ ದಳ ರಚನೆ: ಹಿಂದೂ ಜನಜಾಗೃತಿ ಸಮಿತಿಗೆ ಗೃಹ ಸಚಿವರ ಭರವಸೆ

Hindu 1
ಹಿಂದುಪರ ಸಂಘಟನೆಗಳ ನಿಯೋಗ ಭಾನುವಾರ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.
Published on

ಬೆಂಗಳೂರು: ಹಿಂದು ಯುವತಿಯರು, ಮಹಿಳೆಯರು ನಾಪತ್ತೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಚುರುಕುಗೊಳಿಸಲು ಸೂಚಿಸುವೆ. ಅಲ್ಲದೆ, ಲವ್ ಜಿಹಾದ್ ತಡೆಗೆ ವಿಶೇಷ ಪೊಲೀಸ್ ದಳ ರಚನೆ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆಗೆ ಪರಿಶೀಲಿಸುವುದಾಗಿ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ ನೀಡಿದರು.

ಜಯಮಹಲ್ ನ ಗೃಹ ಸಚಿವರ ಅಧಿಕೃತ ನಿವಾಸದಲ್ಲಿ ಭಾನುವಾರ ಭೇಟಿ ಮಾಡಿದ ಹಿಂದುಪರ ಸಂಘಟನೆಗಳ ನಿಯೋಗದ ಮನವಿ ಸ್ವೀಕರಿಸಿದ ಅವರು, ಕಾನೂನು ಮತ್ತು ಸುವ್ಯವಸ್ಥೆ ಕಾಯ್ದುಕೊಳ್ಳುವ ಜತೆಗೆ ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಸರ್ಕಾರ ಬದ್ಧತೆಯಿಂದ ಕಾರ್ಯನಿರ್ವವಹಿಸುತ್ತದೆ ಎಂದು ಹೇಳಿದರು.

ಕಳವಳ

ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದರೂ ಲವ್ ಜಿಹಾದ್ ಅವ್ಯಾಹತವಾಗಿ ನಡೆದಿದ್ದು, ಉತ್ತರಪ್ರದೇಶ ಮಾದರಿಯಲ್ಲಿ ಲವ್ ಜಿಹಾದ್ ವಿರೋಧಿ ವಿಶೇಷ ದಳ ರಚಿಸಲು ಹಿಂದೂ ಜನಜಾಗೃತಿ ಸಮಿತಿ ಇನ್ನಿತರ ಸಂಘಟನೆಗಳು ಮನವಿ ಮಾಡಿದವು. ರಾಷ್ಟ್ರೀಯ ತನಿಖಾ ದಳದ ವರದಿಯಲ್ಲಿ ಉಲ್ಲೇಖಿಸಿದ ಅಂಶಗಳ ಪ್ರಕಾರ ರಾಜ್ಯದ ಐದು ಜಿಲ್ಲೆಗಳಲ್ಲಿ ಶಾಹೀನ್ ಗ್ಯಾಂಗ್ ಸಕ್ರಿಯವಾಗಿದ್ದು, ಕೆಲವು ಮೌಲ್ವಿಗಳು ಹಾಗೂ ಮದರಸಾಗಳು ಲವ್ ಜಿಹಾದ್​ಗೆ ಸಾಥ್ ನೀಡಿವೆ ಎಂದು ಈ ಮನವಿಯಲ್ಲಿ ಕಳವಳ ವ್ಯಕ್ತಪಡಿಸಿವೆ.

ನಿಯೋಗದಲ್ಲಿ ಹಿಂದೂ ಜನಜಾಗೃತಿ ಸಮಿತಿ ರಾಜ್ಯ ವಕ್ತಾರ ಮೋಹನ್ ಗೌಡ, ರಣರಾಗಿಣಿ ತಂಡದ ಭವ್ಯಾಗೌಡ, ದುರ್ಗಾಸೇನೆಯ ನಂದಿನಿ ನಾಗರಾಜ್, ಶ್ರೀರಾಮಸೇನೆಯ ಸುಂದರೇಶ್, ಅಮರನಾಥ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net