

ಹಾವೇರಿ: ಕಾಡಿನಲ್ಲಿ ಪ್ರೇಮಿಗಳಿಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ಹಾವೇರಿ ತಾಲೂಕಿನ ಬಸಾಪುರ ಗ್ರಾಮದ ಬಳಿಯ ವಾಟರ್ ಟ್ಯಾಂಕ್ ಬಳಿ ನಡೆದಿದೆ.
ಮೃತ ಪ್ರೇಮಿಗಳನ್ನು ನೇತ್ರಾ ಬಾಳಿಕಾಯಿ (17) ಹಾಗೂ ಪ್ರವೀಣ ಬಾಗಿಲದ (24) ಎಂದು ಗುರುತಿಸಲಾಗಿದೆ. ಸ್ಥಳದಲ್ಲಿ ವಿಷದ ಬಾಟಲ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳದಲ್ಲಿ ಪತ್ತೆಯಾದ ಆಧಾರ ಕಾರ್ಡ್ ಹಾಗೂ ಕೆಲ ದಾಖಲಗೆಳ ಪ್ರಕಾರ ಮೃತರ ಮಾಹಿತಿ ಲಭ್ಯವಾಗಿದೆ. ಇಬ್ಬರು ಐದಾರು ವರ್ಷದಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು. ಕಳೆದ ನಾಲ್ಕೈದು ದಿನಗಳ ಹಿಂದೆ ಮನೆಯಿಂದ ಓಡಿ ಹೋಗಿದ್ದರು.
ಬಹುಶಃ ಮನೆಯಲ್ಲಿ ಸತ್ಯ ಹೇಳೊಕೆ ಆಗದೆ ಭಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಎರಡು ದಿನಗಳ ಹಿಂದೆಯೇ ವಿಷ ಕುಡಿದಿದ್ದು ಇಂದು ಶವವಾಗಿ ಪತ್ತೆಯಾಗಿದ್ದಾರೆನ್ನಲಾಗಿದೆ.
ಘಟನಾ ಸ್ಥಳಕ್ಕೆ ಗುತ್ತಲ ಠಾಣಾ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ. ಕೊಲೆಯ ಅನುಮಾನ ವ್ಯಕ್ತವಾಗಿದ್ದು, ಕೊಲೆಯೋ? ಅಥವಾ ಆತ್ಮಹತ್ಯೆಯೋ? ಎಂಬುದು ತನಿಖಾ ನಂತರವಷ್ಟೇ ತಿಳಿದುಬರಲಿದೆ. (ದಿಗ್ವಿಜಯ ನ್ಯೂಸ್) ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್ಬುಕ್ ಪೇಜ್ ಲೈಕ್ ಮಾಡಿ