ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಜೋಡಿ ಮೃತ್ಯು

sucide
Published on

ಮಂಗಳೂರು: ನಗರದ ಪಂಪ್‌ವೆಲ್ ಬಳಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಜೋಡಿ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ.


ಜಪ್ಪು ಬಪ್ಪಾಲ್‌ನ ಸಫ್ರೀನಾ (22) ಮತ್ತು ಬಂಟ್ವಾಳದ ನಿಹಾಲ್ (19) ಮೃತಪಟ್ಟವರು. ಮೇ 7ರಂದು ಪಂಪ್‌ವೆಲ್ ಬಳಿ ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅಸ್ವಸ್ಥಗೊಂಡಿದ್ದ ಈ ಜೋಡಿಯನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.


ನಿಹಾಲ್ ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದರು. ಸಫ್ರೀನಾ ಮನೆಯಲ್ಲೇ ಇದ್ದರು. ಇವರಿಬ್ಬರೂ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net