ಒಂದೇ ಹಗ್ಗಕ್ಕೆ ಅಪ್ರಾಪ್ತ ಪ್ರೇಮಿಗಳು ನೇಣಿಗೆ ಬಲಿ

Published on

ಕಲಬುರಗಿ: ಅಪ್ರಾಪ್ತ ವಯಸ್ಸಿನ ಪ್ರೇಮಿಗಳಿಬ್ಬರು ಜೊತೆಯಾಗಿ ಒಂದೇ ಹಗ್ಗ ಬಳಸಿ ನೇಣಿಗೆ ಶರಣಾದ ಘಟನೆ ಜಿಲ್ಲೆಯ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಾಳಪ್ಪ (16) ಹಾಗೂ ನಸೀಮಾ (16) ಒಂದೇ ಹಗ್ಗ ಬಳಸಿ ಎದುರುಬದುರಾಗಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದವರು ಎಂದು ಪೊಲೀಸರು ತಿಳಿಸಿದ್ದಾರೆ.

ಇಬ್ಬರೂ ಗ್ರಾಮದ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ಓದುತ್ತಿದ್ದರು. ಇಬ್ಬರ ಮಧ್ಯೆ ಪ್ರೀತಿ ಅಂಕುರಿಸಿತ್ತು. ಆದರೆ ಉಭಯ ಕುಟುಂಬದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿ ಬುದ್ಧಿವಾದ ಹೇಳಿದ್ದರು. ಇದರಿಂದ ಬೇಸತ್ತ ಇಬ್ಬರೂ ಗ್ರಾಮದ ಹೊರವಲಯದ ಮರವೊಂದಕ್ಕೆ ನೇಣು ಬಿಗಿದುಕೊಂಡು ಸಾವಿಗೀಡಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net