

ಮಂಗಳೂರು: ಯುವ ವಕೀಲ ಕುಲದೀಪ್ ಎಂಬವರ ಮೇಲೆ ಪುಂಜಾಲಕಟ್ಟೆ ಪೊಲೀಸರು ದೌರ್ಜನ್ಯ ನಡೆಸಿರುವುದನ್ನು ಖಂಡಿಸಿ ಮಂಗಳೂರು ವಕೀಲರ ಸಂಘದ ನೇತೃತ್ವದಲ್ಲಿ ಬುಧವಾರ ನ್ಯಾಯಾಲಯದ ಸಂಕೀರ್ಣದಲ್ಲಿ ಪ್ರತಿಭಟನೆ ನಡೆಯಿತು.
ಸಿವಿಲ್ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು, ಈ ನಡುವೆ ಸುಳ್ಳು ದೂರು ದಾಖಲಿಸಿ ಅವರನ್ನು ಮನೆಯಿಂದ ಬಂಧಿಸಿ, ದಾರಿ ಮಧ್ಯೆ ಹೆದರಿಸಿ ಹೇಳಿಕೆ ಪಡೆದಿದ್ದಾರೆ. ಮನೆಯವರ ವಿರುದ್ಧ ಕರ್ತವ್ಯಕ್ಕೆ ಅಡ್ಡಿ ಪ್ರಕರಣ ದಾಖಲಿಸುವ ಬೆದರಿಕೆ ಹಾಕಿದ್ದಾರೆ. ಆ ಪೊಲೀಸರನ್ನು ಅಮಾನತುಗೊಳಿಸಿ ವಿಚಾರಣೆ ನಡೆಸಬೇಕು ಎಂದು ವಕೀಲರು ಒತ್ತಾಯಿಸಿದರು.