ಎಲ್‌ಪಿಜಿ. ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆ; ರಾಷ್ಟ್ರೀಯ ಹೆದ್ದಾರಿಯಲ್ಲಿ ಆತಂಕ ಸೃಷ್ಟಿ

16 Dwd 8
Published on

ಧಾರವಾಡ: ಬೆಳಗಾವಿ ಕಡೆಯಿಂದ ನಗರದತ್ತ ಹೊರಟಿದ್ದ ಎಲ್‌ಪಿಜಿ ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆಯಾಗಿ ಗಂಟೆಗಟ್ಟಲೇ ಆತಂಕ ಸೃಷ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬುಧವಾರ ಸಂಜೆ ನಡೆಯಿತು. ಎಚ್.ಪಿ. ಕಂಪನಿಗೆ ಸೇರಿದದ ಟ್ಯಾಂಕರ್ ಬೇಲೂರು ಕೈಗಾರಿಕಾ ಪ್ರದೇಶದ ಬಳಿ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿಯ ಅಂಡರ್‌ಪಾಸ್‌ಗೆ ಬರುತ್ತಿದ್ದಂತೆ ಗ್ಯಾಸ್ ಸೋರಿಕೆಯಾಗಿದೆ. ಹೆದ್ದಾರಿ ಮೇಲೆ ವಾಹನಗಳ ಓಡಾಟ ನಿರ್ಬಂಧಿಸಲಾಗಿದ್ದು, ಬದಲಿ ಮಾರ್ಗ ಸೂಚಿಸಲಾಗಿದೆ. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದು, ಸುರಕ್ಷತಾ ಕ್ರಮ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net