ಎಲ್ಲರೂ ಕಡ್ಡಾಯ ಮತದಾನ ಮಾಡಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ್

13
Published on

ಮೈಸೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಕಡ್ಡಾಯವಾಗಿ ಮತಗಟ್ಟೆಗಳಿಗೆ ಬಂದು ಎಲ್ಲರೂ ಮತದಾನ ಮಾಡಿ ಎಂದು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ್ ಕೋರಿದರು.
ನಗರದ ಟೆನ್ನಿಸ್ ಕ್ಲಬ್ ನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮತದಾರ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತದಾರರು ಅಗತ್ಯ ಮಾಹಿತಿ ಪಡೆಯಲು, ಪ್ರತಿಕ್ರಿಯೆ, ಸಲಹೆ ಹಾಗೂ ದೂರು ಸಲ್ಲಿಸಲು ಅನುಕೂಲ ಆಗುವಂತೆ ಮತದಾರರ ಸಹಾಯವಾಣಿ 1950ಗೆ ಕರೆ ಮಾಡಬಹುದಾಗಿದೆ ಎಂದು ಅವರು ತಿಳಿಸಿದರು.
ಯಾರು ಮತದಾನದಿಂದ ದೂರ ಉಳಿಯಬಾರದು. ಪ್ರತಿಯೊಬ್ಬರು ತಪ್ಪದೇ ಕಡ್ಡಾಯವಾಗಿ ಮತದಾನ ಮಾಡಿ ಸದೃಢ ಭಾರತದ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಅವರು ತಿಳಿಸಿದರು.
ನಗರ ಪಾಲಿಕೆ ಆಯುಕ್ತೆ ಡಾ.ಎನ್.ಎನ್. ಮಧು, ಜಿಲ್ಲಾ ಸ್ವೀಪ್ ಸಮಿತಿಯ ನೋಡೆಲ್ ಅಧಿಕಾರಿ ಶಾಂತಾ, ನಗರಪಾಲಿಕೆಯ ಕಾರ್ಯಪಾಲಕ ಅಭಿಯಂತ ನಾಗರಾಜ್, ವಲಯ ಆಯುಕ್ತೆ ರೇಖಾ ಶೆಟ್ಟಿ, ಪರಿಸರ ಅಭಿಯಂತರಾದ ಮೈತ್ರಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net