

ಮೈಸೂರು: ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಎಂ.ಕೆ. ಸವಿತಾ ಅವರನ್ನು ಮೈಸೂರು ವಿಶ್ವ ವಿದ್ಯಾಲಯದ ಕುಲಸಚಿವೆ (ಆಡಳಿತ)ಯಾಗಿ ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಎಚ್. ಪ್ರಸಾದ್ ಮಂಗಳವಾರ ಆದೇಶ ಹೊರಡಿಸಿದ್ದಾರೆ. ಕುಲಸಚಿವೆಯಾಗಿ ಕಾರ್ಯನಿರ್ವಹಿಸುತ್ತಿದ್ದ ವಿ.ಆರ್. ಶೈಲಜಾಗೆ ಸ್ಥಳ ನಿಯುಕ್ತಿ ಮಾಡಿಲ್ಲ.