ಕೆಎಎಸ್ ಪರೀಕ್ಷಾ ಕೇಂದ್ರ ಸ್ಥಾಪಿಸಿ

HN_MN BIRADAR
Published on

ವಿಜಯಪುರ: ಕರ್ನಾಟಕ ಲೋಕಸೇವಾ ಆಯೋಗವು ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ಆ.24 ರಂದು ನಡೆಸುತ್ತಿರುವುದು ಸಂತೋಷದ ವಿಷಯ. ಅವಿಭಜಿತ ವಿಜಯಪುರ ಜಿಲ್ಲೆಯಿಂದ 20 ರಿಂದ 25 ಸಾವಿರ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಾರೆ. ಆದರೆ ಕೋವಿಡ್-19 ಹಿನ್ನೆಲೆ ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ ಅವಿಭಜಿತ ವಿಜಯಪುರದಲ್ಲಿ ಪರೀಕ್ಷಾ ಕೇಂದ್ರ ಸ್ಥಾಪಿಸಬೇಕು ಎಂದು ಚಾಣಕ್ಯ ಕರಿಯರ್ ಅಕಾಡೆಮಿಯ ಸಂಸ್ಥಾಪಕ ಎನ್.ಎಂ.ಬಿರಾದಾರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ವಿಜಯಪುರ ಜಿಲ್ಲೆಯ ವಿದ್ಯಾರ್ಥಿಗಳು ನೆರೆ ಜಿಲ್ಲೆಗೆ ಹೋಗಬೇಕಾದರೆ ಕನಿಷ್ಠ 170ರಿಂದ 220 ಕಿ.ಮೀ. ವರೆಗೆ ಪ್ರಯಾಣ ಮಾಡಬೇಕಾಗುತ್ತದೆ. ಕರೊನಾ ಸಂದರ್ಭದಲ್ಲಿ ಪ್ರಯಾಣ ಸೂಕ್ತವಲ್ಲ ಮತ್ತು ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ಹೊರೆಯಾಗುತ್ತದೆ. ಈಗಾಗಲೇ ಪರೀಕ್ಷಾ ಕೇಂದ್ರಗಳನ್ನು ಘೋಷಣೆ ಮಾಡಲಾಗಿದೆ. ಆದರೆ ವಿಜಯಪುರ ಮತ್ತು ಬಾಗಲಕೋಟೆ ವಿದ್ಯಾರ್ಥಿಗಳ ಹಿತದೃಷ್ಟಿಕೋನದಿಂದ ವಿಜಯಪುರದಲ್ಲಿ ಪರೀಕ್ಷಾ ಕೇಂದ್ರ ಸ್ಥಾಪಿಸಬೇಕೆಂದು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net