ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾಗಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಪುನರಾಯ್ಕೆ

MN-Rajendra-Kumar-1-608x465
Published on

ಮಂಗಳೂರು : ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ರಂಗದ ಅಗ್ರಮಾನ್ಯ ನಾಯಕರಾಗಿ ರಾಜ್ಯ , ರಾಷ್ಟ್ರೀಯ ಮಟ್ಟದಲ್ಲಿ
ಗುರುತಿಸಿಕೊಂಡಿರುವ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು ಇದರ ಅಧ್ಯಕ್ಷರಾಗಿ ಎರಡನೇ ಬಾರಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ . ಬೆಂಗಳೂರಿನಲ್ಲಿ ಸೋಮವಾರ ನಡೆದ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಡಳಿತ ಮಂಡಳಿಯ ಸಭೆಯಲ್ಲಿ ಈ ಆಯ್ಕೆ ನಡೆದಿದೆ . ಮಂಗಳೂರು ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರಿ ಸಂಘದ ಪ್ರತಿನಿಧಿಯಾಗಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ನಿರ್ದೇಶಕ ಚುನಾವಣೆಗೆ ಸ್ಪರ್ಧಿಸಿದ ಡಾ. ಎಂ.ಎನ್.ರಾಜೇಂದ್ರಕುಮಾರ್ ಅವಿರೋಧವಾಗಿ ಆಯ್ಕೆಗೊಂಡು , ಈಗ ಅಧ್ಯಕ್ಷರಾಗಿ ಪುನರಾಯ್ಕೆಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net