ಶತ್ರುಗಳನ್ನು ಹಿಮ್ಮೆಟ್ಟಿಸುವ ಕೆಚ್ಚು ಇಮ್ಮಡಿ -ಸಂಸದ ಕ್ಯಾ.ಬ್ರಿಜೇಶ್ ಚೌಟ

IMG-20240408-WA0344
Published on


ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಆದಂಪುರ ವಾಯುನೆಲೆಗೆ ಭೇಟಿ ನೀಡಿ ಯೋಧರನ್ನು ಅಭಿನಂದಿಸಿರುವುದು
ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ದೇಶದ ಸೈನಿಕರ ಆತ್ಮಸ್ಥೈರ್ಯವನ್ನು ಇಮ್ಮಡಿಗೊಳಿಸಿದೆ.
ಜತೆಗೆ ಪಾಕಿಸ್ತಾನಕ್ಕೂ ದೊಡ್ಡ ಎಚ್ಚರಿಕೆ ಸಂದೇಶ ರವಾನಿಸಿದೆ ಎಂದು ದ.ಕ.ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.
ಪ್ರಧಾನಿ ಅವರು ದೇಶದ ಪ್ರಮುಖ ವಾಯುನೆಲೆಗೆ ಪಾಕಿಸ್ತಾನದ ವಿರುದ್ಧ ಸಂಘರ್ಷ ನಡೆಯುತ್ತಿರುವಾಗಲೇ ಭೇಟಿ ನೀಡಿರುವುದು ಗಮನಾರ್ಹ ಬೆಳವಣಿಗೆ. ದೇಶದ ನಾಯಕನೇ ಯುದ್ಧಭೂಮಿಯಲ್ಲಿ ಕಾಣಿಸಿಕೊಂಡು ಕಾರ್ಯಾಚರಣೆ ಮುಂಚೂಣಿಯಲ್ಲಿರುವ ನಮ್ಮ ಸೈನಿಕರು, ಸೇನಾಧಿಕಾರಿಗಳಿಗೆ ಮತ್ತಷ್ಟು ಧೈರ್ಯ, ಆತ್ಮಬಲವನ್ನು ತುಂಬಿದ್ದಾರೆ. ಶತ್ರುಗಳನ್ನು ಹಿಮ್ಮಟ್ಟಿಸುವ ವೇಳೆ ದೇಶದ ಆಡಳಿತದ ಚುಕ್ಕಾಣಿ ಹಿಡಿದ ನಾಯಕ ಬೆನ್ನುತಟ್ಟಿದಾಗ ದೇಶಕ್ಕಾಗಿ ಇನ್ನಷ್ಟು ತ್ಯಾಗ ಮಾಡಲು ಪ್ರೇರೇಪಿಸುತ್ತದೆ ಎಂಬುದನ್ನು ಓರ್ವ ಸೈನಿಕನಾಗಿ ನಾನು ಸ್ಪಷ್ಟವಾಗಿ ಹೇಳಬಲ್ಲೆ ಎಂದು ಕ್ಯಾ. ಬ್ರಿಜೇಶ್ ಚೌಟ ಅಭಿಪ್ರಾಯಪಟ್ಟಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net