ರೇಣುಕಾಚಾರ್ಯ, ಜೀವರಾಜ್​ಗೆ ಮತ್ತೆ ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನ

MP DN
Published on

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರ ರಾಜಕೀಯ ಕಾರ್ಯದರ್ಶಿಗಳಾಗಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹಾಗೂ ಮಾಜಿ ಶಾಸಕ ಡಿ.ಎನ್.ಜೀವರಾಜ್ ಮರು ನೇಮಕವಾಗಿದ್ದಾರೆ.

ಸಂಪುಟ ದರ್ಜೆ ಸಚಿವ ಸ್ಥಾನಮಾನ ಕಲ್ಪಿಸಿ, ಸರ್ಕಾರ ಆದೇಶ ಹೊರಡಿಸಿದೆ. ಬೊಮ್ಮಾಯಿ‌ ಆದ ಬಳಿಕ ಮುಖ್ಯಮಂತ್ರಿ ಕಚೇರಿಗೆ ಹೊಂದಿಕೊಂಡಿದ್ಸ ಎಲ್ಲ ನೇಮಕಗಳನ್ನು ರದ್ದುಪಡಿಸಲಾಗಿತ್ತು.

ಬಿ.ಎಸ್.ಯಡಿಯೂರಪ್ಪ ಅವಧಿಯಲ್ಲಿ ರೇಣುಕಾಚಾರ್ಯ ಮತ್ತು ಜೀವರಾಜ್ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದರು. ಬೊಮ್ಮಾಯಿ‌ ಸಿಎಂ ಆಗಿ 60 ದಿನಗಳಾದ ಬಳಿಕ ಇವರಿಬ್ಬರು ಮತ್ತದೇ ಸ್ಥಾನ ಅಲಂಕರಿಸಿ, ಸಂಪುಟ ದರ್ಜೆ ಸಚಿವರ ಸವಲತ್ತುಗಳನ್ನು ಪಡೆದುಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net