ಎಂ.ಶ್ರೀಧರ್ ಹೆಮ್ಮರಗಾಲ ಗ್ರಾಪಂ ಅಧ್ಯಕ್ಷ

Oplus_131072
Oplus_131072
Published on

ನಂಜನಗೂಡು: ತಾಲೂಕಿನ ಹೆಮ್ಮರಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಎಂ.ಶ್ರೀಧರ್ ಅವಿರೋಧವಾಗಿ ಆಯ್ಕೆಯಾದರು.

ಹಿಂದಿನ ಅಧ್ಯಕ್ಷ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಸೋಮವಾರ ಚುನಾವಣೆ ಪ್ರಕ್ರಿಯೆ ನಡೆಯಿತು. ಪಂಚಾಯಿತಿಯ ಎಲ್ಲ 16 ಸದಸ್ಯರು ಹಾಜರಾಗಿದ್ದರು. ಅಧ್ಯಕ್ಷ ಸ್ಥಾನಕ್ಕೆ ಶ್ರೀಧರ್ ಅವರನ್ನು ಹೊರತುಪಡಿಸಿ ಬೇರಾರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿಯೂ ಆದ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಇಇ ಶಿವಕುಮಾರ್ ಪ್ರಕಟಿಸಿದರು.

ನೂತನ ಅಧ್ಯಕ್ಷರಿಗೆ ಗ್ರಾಮಸ್ಥರು, ಸದಸ್ಯರು ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ಸನ್ಮಾನ ಮಾಡಿದರು. ನೂತನ ಅಧ್ಯಕ್ಷ ಶ್ರೀಧರ್ ಮಾತನಾಡಿ, ಜನರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸುವುದರ ಮೂಲಕ ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದರು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಜಯಮ್ಮ ನಿಂಗಶೆಟ್ಟಿ, ಸದಸ್ಯರಾದ ಪುರುಷೋತ್ತಮ್, ಪುಟ್ಟಸ್ವಾಮಿನಾಯ್ಕ, ಪ್ರಶಾಂತ್, ಶೀಲಾ ನಾರಾಯಣ, ಅಂಬಿಕಾ ರಂಗಸ್ವಾಮಿ, ಭಾಗ್ಯಾ ಉಮೇಶ್, ಗೀತಾ ಬಸವರಾಜು, ರವಿಕುಮಾರ್, ನಾಗರಾಜು, ಗೌರಮ್ಮ, ಜ್ಯೋತಿ, ಶಿವಮಾದಪ್ಪ, ಮಹದೇವಮ್ಮ, ಮಹೇಶ, ಮಲ್ಲನಾಯಕ, ಮುಖಂಡ ಸಿದ್ದಶೆಟ್ಟಿ, ಗ್ರಾಪಂ ಅಭಿವೃದ್ಧಿ ಅಧಿಕಾರಿ ಪುಟ್ಟಸ್ವಾಮಿ ಆಚಾರಿ, ಬಿಲ್ ಕಲೆಕ್ಟರ್ ಪ್ರಕಾಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net