

ಮೈಸೂರು ನಗರ ಪಾಲಿಕೆ ಕಾಯಂ ಹಾಗೂ ಗುತ್ತಿಗೆ ಪೌರಕಾರ್ಮಿಕರ ಮಹಾಸಂಘದ ಗೌರವಾಧ್ಯಕ್ಷರಾಗಿ ಆದಿದ್ರಾವಿಡ ಸಮುದಾಯದ ಮುಖಂಡ ಎಂ.ವಡಿವೇಲು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಉನ್ನತ ಸಮಿತಿ ಅಧ್ಯಕ್ಷ ಎನ್.ಮಾರ ತಿಳಿಸಿದರು.
ಸಂಘದ ಗೌರವ ಕಾರ್ಯದರ್ಶಿಯಾಗಿ ಎಂ.ವಿ.ವೆಂಕಟೇಶ್, ಉನ್ನತ ಸಮಿತಿ ಕಾರ್ಯಾಧ್ಯಕ್ಷರಾಗಿ ಡಿ.ಆರ್.ರಾಜು, ಗೌರವ ಕಾರ್ಯದರ್ಶಿಯಾಗಿ ಹನುಮಂತ, ಜಿಲ್ಲಾ ಕಾರ್ಯಾಧ್ಯಕ್ಷರಾಗಿ ಆರ್.ನಾಗರಾಜು, ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಈ.ಚಾಮ, ಜಿಲ್ಲಾ ಕಾರ್ಯದರ್ಶಿಯಾಗಿ ಎಸ್.ದಿನೇಶ್‌ಕುಮಾರ್ ಹಾಗೂ ಇನ್ನಿತರ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
25 ಸಾವಿರ ಪೌರಕಾರ್ಮಿಕರನ್ನು ಕಾಯಂಗೊಳಿಸಬೇಕು. ಈಗಾಗಲೇ ಮೃತಪಟ್ಟಿರುವ ಕೆಲ ಪೌರಕಾರ್ಮಿಕರ ಕುಟುಂಬಗಳಿಗೆ ಪರಿಹಾರ ನೀಡಬೇಕು. ಯುಜಿಡಿ ನೌಕರರನ್ನೂ ಕಾಯಂಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದರು.
ಮುಖಂಡರಾದ ವಡಿವೇಲು, ಮಂಚಯ್ಯ, ಎನ್.ಮೋಹನ್‌ಕುಮಾರ್, ಮಂಚಯ್ಯ, ಶ್ರೀನಿವಾಸ್ ಇನ್ನಿತರರು ಹಾಜರಿದ್ದರು.